Posted On: October 22nd 2026, 07:45 am
ದಸರಾ ಹಬ್ಬದ ಪ್ರಯುಕ್ತ ಬನ್ನಿ ನೀಡಲು ಆಗಮಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡು, ಹಬ್ಬದ ಶುಭಾಶಯಗಳನ್ನು ಹಂಚಿಕೊಳ್ಳಲಾಯಿತು.
ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಬನ್ನಿ ವಿನಿಮಯವು ಪರಸ್ಪರ ಗೌರವ, ಆತ್ಮೀಯತೆ ಹಾಗೂ ಸೌಹಾರ್ದತೆಯ ಸಂಕೇತವಾಗಿದೆ. ಇಂತಹ ಸಂಪ್ರದಾಯಗಳು ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತವೆ.
ನಾಡಿನ ಸಮಸ್ತ ಜನರ ಬದುಕಿನಲ್ಲಿ ಸುಖ, ಶಾಂತಿ, ಸಮೃದ್ಧಿ ಮತ್ತು ಸಂತೋಷ ನೆಲೆಸಲಿ ಎಂದು ಹಾರೈಸುತ್ತಾ, ಎಲ್ಲರಿಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು.
#pf
#manvi #raichur #bjp