Instagram story viewer> @yogeeshwaracp> Posts
110.1K
followers
6
following
6 Term MLA Channapatna, Govt of Karnataka | Former Minister of forest and tourism
POSTS STORIES REELS TAGGED
🎬 "ಸೈನಿಕ 2" ಚಿತ್ರದ ಅಧಿಕೃತ ಟೀಸರ್ ಇದೀಗ ನಿಮ್ಮ ಮುಂದೆ!
ದೇಶಭಕ್ತಿ, ಧೈರ್ಯ, ಕರ್ತವ್ಯ ಮತ್ತು ಹೋರಾಟದ ಮತ್ತೊಂದು ಅದ್ಭುತ ಅಧ್ಯಾಯಕ್ಕೆ ಸಾಕ್ಷಿಯಾಗುವ ಕ್ಷಣ ಬಂದಿದೆ.
ಮೊದಲ ಭಾಗದಂತೆ ನಿಮ್ಮ ಮನ ಗೆದ್ದ ಸೈನಿಕ ಚಿತ್ರದ ಪರಂಪರೆಯನ್ನು ಮುಂದುವರಿಸುವ ಈ ಪಯಣಕ್ಕೆ ನಿಮ್ಮ ಪ್ರೀತಿ ಮತ್ತು ಬೆಂಬಲವೇ ನಮ್ಮ ಶಕ್ತಿ.
#Sainika2 #TeaserOutNow #KannadaCinema #CPYogeeshwara #Dhyanyogeeshwara by @yogeeshwaracp
24
3 months ago
Download
My next project #sainika2 with young talent @dhyanyogeeshwara produced by @sheelayogeeshwara Madam.. the first film of @yogeeshwaracp sir was a superhit musical treat #sainika when I was a kid, after 24 years the part two is on my shoulders and I am very privileged to be directing it… I thank Yogeshwar sir and @sreekanthkp sir for believing and handing over this responsibility to me!! Requesting all my friends and family to bless me on this journey..

@shivakumarart 
@harimonium 
@manju_atharva 
@sanketh_mys 
@nirmalkumar_vfx 
@amar.art07 
#VijaiiRaj
@ashik_kusugolli 
@kaanistudio 
@amarnath_cn
#sandalwoodmovies 
#sainika2 taken in Bangalore, India by @yogeeshwaracp
158
3 months ago
Download
🇮🇳 ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಹಾರ್ದಿಕ ಶುಭಾಶಯಗಳು 🇮🇳
ಸತ್ಯ, ಅಹಿಂಸೆ ಮತ್ತು ಸರಳತೆಯ ಮೂಲಕ ದೇಶಕ್ಕೆ ಹೊಸ ದಾರಿ ತೋರಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ನಮನಗಳು. 🙏
“ಜೈ ಜವಾನ್, ಜೈ ಕಿಸಾನ್” ಎಂಬ ಘೋಷಣೆಯ ಮೂಲಕ ದೇಶದ ಸೈನಿಕರು ಹಾಗೂ ರೈತರ ಮಹತ್ವವನ್ನು ಸಾರಿದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಗೌರವಪೂರ್ವಕ ನಮನಗಳು. 🙏
🌿 ಸತ್ಯವೇ ನಮ್ಮ ಶಕ್ತಿ
🕊️ ಅಹಿಂಸೆಯೇ ನಮ್ಮ ಮಾರ್ಗ
🇮🇳 ದೇಶಸೇವೆಯೇ ನಮ್ಮ ಸಂಕಲ್ಪ
ಎಲ್ಲರಿಗೂ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯ ಶುಭಾಶಯಗಳು. 🇮🇳
#ಗಾಂಧಿಜಯಂತಿ #ಶಾಸ್ತ್ರಿಜಯಂತಿ #MahatmaGandhi #LalBahadurShastri #JaiJawanJaiKisan by @yogeeshwaracp
0
16 days ago
Download
ಇಂದು ಚನ್ನಪಟ್ಟಣ ನಗರದ ಶತಮಾನೋತ್ಸವ ಭವನದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗದ ಚನ್ನಪಟ್ಟಣ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಎರಡನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ, ಜಿಲ್ಲೆಯ ಕುರುಬ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾನ್ಯ  ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಹಾಗೂ ಜೀವನದ ಪಯಣಕ್ಕೆ ಶುಭ ಹಾರೈಸಿದೆ.

ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಇನ್ನಷ್ಟು ಆತ್ಮವಿಶ್ವಾಸ ಮತ್ತು ಸಾಧನೆಯ ಹಂಬಲವನ್ನು ಮೂಡಿಸುತ್ತವೆ. ಶಿಕ್ಷಣವೇ ವ್ಯಕ್ತಿಯ ಹಾಗೂ ಸಮಾಜದ ಪ್ರಗತಿಗೆ ಬಲವಾದ ಅಡಿಪಾಯ. ಇಂದು ಪುರಸ್ಕಾರ ಪಡೆದಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಇನ್ನಷ್ಟು ಉನ್ನತ ಸಾಧನೆ ಮಾಡಿ, ತಮ್ಮ ಕುಟುಂಬ, ಸಮುದಾಯ ಹಾಗೂ ನಮ್ಮ ಜಿಲ್ಲೆಯ ಹೆಸರನ್ನು ಬೆಳಗಿಸಲಿ ಎಂಬುದು ನನ್ನ ಆಶಯ.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುತ್ತಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗದ ಚನ್ನಪಟ್ಟಣ ತಾಲ್ಲೂಕು ಘಟಕದ ಕಾರ್ಯವನ್ನು ಅಭಿನಂದಿಸುತ್ತೇನೆ.

ಪ್ರತಿಭಾ ಪುರಸ್ಕಾರ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳು. 💐📚

#Channapatna #PrathibhaPuraskara #Education #StudentAchievement #CPYogeshwar by @yogeeshwaracp
0
21 days ago
Download
ಇಂದು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಯಿತು.

ನೀಲಸಂದ್ರ ಗ್ರಾಮದ ಶ್ರೀ ಭೈರವೇಶ್ವರ ದೇವಸ್ಥಾನದ ಸಮೀಪ ಸೇತುವೆ ನಿರ್ಮಾಣ ಕಾಮಗಾರಿಗೆ ಗ್ರಾಮಸ್ಥರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದೆನು. ಈ ಸೇತುವೆ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಬ್ರಹ್ಮಣಿಪುರ ಹಾಗೂ ಕನ್ನಮಂಗಲ ಗ್ರಾಮಗಳಲ್ಲಿ ಆಯುಷ್ಮಾನ್ ಭಾರತ ಆಸ್ಪತ್ರೆ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಗ್ರಾಮಸ್ಥರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದೆನು. ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯುವಂತಾಗುವುದು ನಮ್ಮ ಪ್ರಮುಖ ಆಶಯವಾಗಿದೆ.

ನಂತರ ಕನ್ನಮಂಗಲ ರಸ್ತೆಯಲ್ಲಿರುವ ಸಾಧನ ವಿದ್ಯಾಲಯಕ್ಕೆ ಭೇಟಿ ನೀಡಿ, ಗಣಪತಿ ಪೂಜೆಯಲ್ಲಿ ಭಾಗವಹಿಸಿ, ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯಲಾಯಿತು.

ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಮೂಲಭೂತ ಸೌಕರ್ಯ, ಆರೋಗ್ಯ, ಶಿಕ್ಷಣ ಹಾಗೂ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. by @yogeeshwaracp
0
a month ago
Download
ಇಂದು ವಿರುಪಾಕ್ಷೀಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಾಯಿತು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ನಮ್ಮ ಗಮನಕ್ಕೆ ತಂದಿದ್ದು, ಪ್ರತಿಯೊಂದು ಸಮಸ್ಯೆಯನ್ನೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಅನುಷ್ಠಾನಗೊಳಿಸುವುದು ನಮ್ಮ ಆದ್ಯತೆಯಾಗಿದೆ.

ಇದೇ ಸಂದರ್ಭದಲ್ಲಿ ಬಿ.ವಿ.ಪಾಳ್ಯ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿಗೆ ಗ್ರಾಮಸ್ಥರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದೆ. by @yogeeshwaracp
0
a month ago
Download
🙏🌺 ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು 🌺🙏
ವಿಘ್ನ ವಿನಾಶಕ, ಬುದ್ಧಿ-ಜ್ಞಾನಗಳ ಅಧಿದೇವತೆ ಶ್ರೀ ಗಣಪತಿಯ ಕೃಪೆಯಿಂದ
ನಾಡಿನ ಸಮಸ್ತ ಜನತೆಯ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ಮತ್ತು ಸಂತೋಷ ನೆಲೆಸಲಿ.
ಪ್ರತಿಯೊಂದು ಹೊಸ ಹೆಜ್ಜೆಯಲ್ಲೂ ಯಶಸ್ಸು ದೊರೆಯಲಿ,
ಎಲ್ಲಾ ವಿಘ್ನಗಳು ದೂರವಾಗಿ, ನಾಡಿನ ಅಭಿವೃದ್ಧಿ ಹಾಗೂ ಜನರ ಬದುಕು ಮತ್ತಷ್ಟು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.
ಶ್ರೀ ಗಣೇಶನ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. 🙏
#GaneshChaturthi
#happyganeshchaturthi by @yogeeshwaracp
2
a month ago
Download
ನಾಡಿನ ಸಮಸ್ತ ಜನತೆಗೆ
ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
#happyganeshchaturthi by @yogeeshwaracp
5
a month ago
Download
ಇಂದು ಚನ್ನಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಾರ್ವಜನಿಕರೊಂದಿಗೆ ಬೆರೆತು ಹಲವು ಮಹತ್ವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕೃಷ್ಣಾಪುರ ಗ್ರಾಮದಲ್ಲಿ ಆಯುಷ್ಮಾನ್ ಭಾರತ್ ಆಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿಗೆ ಗ್ರಾಮಸ್ಥರೊಂದಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಆಸ್ಪತ್ರೆಯು ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರಕಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

ಗರಕಹಳ್ಳಿ ಗ್ರಾಮದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ  ಸಂಕೀರ್ಣದ ನೂತನ ಕಟ್ಟಡದ ಕಾಮಗಾರಿಗೆ ಗ್ರಾಮಸ್ಥರೊಂದಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ.

ಇದೇ ಸಂದರ್ಭದಲ್ಲಿ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಚನ್ನಪಟ್ಟಣ ತಾಲೂಕು ಪಂಚಾಯಿತಿ ಆಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ–2026 ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಮೂಲಕ ಚನ್ನಪಟ್ಟಣ ತಾಲೂಕಿನ ಪ್ರಗತಿಗೆ ನಿರಂತರವಾಗಿ ಶ್ರಮಿಸುವುದು ನಮ್ಮ ಸಂಕಲ್ಪ.

ನಮ್ಮ ತಾಲೂಕಿನ ಅಭಿವೃದ್ಧಿಯ ಪಯಣದಲ್ಲಿ ಸಹಕರಿಸುತ್ತಿರುವ ಎಲ್ಲಾ ಗ್ರಾಮಸ್ಥರು, ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. by @yogeeshwaracp
0
a month ago
Download
ಶುಕ್ರವಾರದ ಕಾರ್ಯಕ್ರಮಗಳ ಕ್ಷಣಗಳು.
#cpyogeshwar #cpyogeeshwara #developmentinaction #congress #channapatna by @yogeeshwaracp
2
a month ago
Download
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ

ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಸಿ. ಬಾಲಕೃಷ್ಣ ಅವರ ಜೊತೆಗೂಡಿ ಚನ್ನಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಚೊಚ್ಚಲ ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ ನೀಡಿ ಮಾತನಾಡಿದೆ.

ಸಾಮಾನ್ಯ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಆಡಳಿತವೇ ಜನರ ಬಾಗಿಲಿಗೆ ತಲುಪಬೇಕು ಎನ್ನುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ಈ ಪ್ರಜಾಸೇವೆ ಆಂದೋಲನವನ್ನು ಪ್ರಾರಂಭಿಸಿದ್ದಾರೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜಿಪಿಆರ್‌ಎಸ್ ಪೋರ್ಟಲ್ ಮೂಲಕ ಸಲ್ಲಿಸಬಹುದು. ಜೊತೆಗೆ ನಿಗದಿತ ಶನಿವಾರಗಳಂದು ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುವ ಪ್ರಜಾಸೇವೆ ಆಂದೋಲನ ಸಭೆಗಳಲ್ಲಿ ನೇರವಾಗಿ ಅಹವಾಲು ಸಲ್ಲಿಸಬಹುದು.

ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ತಿಳಿದುಕೊಳ್ಳುವ ವ್ಯವಸ್ಥೆಯೂ ಇದೆ. ಇಲಾಖಾವಾರು ಅರ್ಜಿಗಳನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನೊಳಗೆ ಸಾಧ್ಯವಾದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು.

ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಬಡವರು ಹಾಗೂ ಅಗತ್ಯವಿರುವವರಿಗೆ ಸರ್ಕಾರದ ನೆರವು ಸಿಗಬೇಕು. ಜನರ ಬಾಯಲ್ಲಿ ಸರ್ಕಾರದ ಬಗ್ಗೆ ಒಳ್ಳೆಯ ಮಾತು ಬಂದಾಗ ಮಾತ್ರ ಅದು ಉತ್ತಮ ಸರ್ಕಾರವಾಗುತ್ತದೆ.

ಗ್ಯಾರಂಟಿ ಯೋಜನೆಗಳಲ್ಲಾಗಲಿ, ಸರ್ಕಾರಿ ಸೇವೆಗಳನ್ನು ಪಡೆಯುವಲ್ಲಾಗಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಇದ್ದರೂ ಪ್ರಜಾಸೇವೆ ಆಂದೋಲನದ ಮೂಲಕ ಅಹವಾಲು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು. by @yogeeshwaracp
1
a month ago
Download
ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ತಂದ ನಾಯಕ, ಮಾಜಿ ರಾಷ್ಟ್ರಪತಿ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಸ್ಮರಣೆಯೊಂದಿಗೆ ಸಮಸ್ತ ಶಿಕ್ಷಕ ವೃಂದಕ್ಕೆ 'ಶಿಕ್ಷಕರ ದಿನಾಚರಣೆ'ಯ ಶುಭಾಶಯಗಳು.
#teachersday2026 #SarvepalliRadhakrishnan by @yogeeshwaracp
0
a month ago
Download

Download All

Save the photos and videos currently loaded on this page.

0Photos
0Videos
Ready to download 0 / 0

Keep this tab open until your download is ready.

back to up